Index   ವಚನ - 80    Search  
 
ಅಯ್ಯಾ, ನಿನ್ನಾಳಾಗಿ ಆರೆನಯ್ಯಾ ಕೆಲಬರ ಬೋಸರಿಸಲು. ಅಯ್ಯಾ, ನಿನ್ನಾಳಾಗಿ ಆರೆನಯ್ಯಾ ಕೆಲಬರ ಸ್ತುತಿಯಿಸಲು. ಅಯ್ಯಾ, ನೀ ನಿತ್ಯನೆಂದು ಮರೆವೊಕ್ಕಡೆ ಸೀಯದಂತಿಪ್ಪರೆ? ಶಿವನೆ ನಿನ್ನ ಕಾಮ್ಯಾರ್ಥವ ಬೇಡಿ ಬಾಧೆಬಡಿಸೆ. ನಿನಗೇನುಂಟಯ್ಯಾ, ನೀನು ನಿಃಕಾಮಿ. ಅಂಜದಿರು, ಫಲಪದವ ಬೇಡೆ; ನೀನಿಹ ಲೋಕ ನಿನಗಿರಲಿ. ಕಾಡದೆ ನಿನ್ನವರೊಳಗೆ ಕೂಡಿರುವ ಪದವ ಕರುಣಿಸಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.