Index   ವಚನ - 105    Search  
 
ಅಯ್ಯಾ, ಹಿಂದೆ ಹಲವು ಯುಗಂಗಳು ತಿರುಗಿ ಬರುತ್ತಿಪ್ಪಲ್ಲಿ ಅವನು ನೀ ಮಾಡಿದೆಯಲ್ಲದೆ ತಮ್ಮಾಜ್ಞೆಯಿಂದ ಬಂದುದಿಲ್ಲವಯ್ಯಾ. ಬಸವಣ್ಣಾ, ನಿಮ್ಮಾಜ್ಞೆಯಲ್ಲಿ ಯುಗಂಗಳು ಭವಭವದಲ್ಲಿ ಕಾಡಿದವು. ಬಸವಣ್ಣಾ ಸಂಸಾರವಾಗಿ ಎನ್ನನೆ ಕಾಡಿದವು. ಬಸವಣ್ಣಾ, ಹೊನ್ನು ಹೆಣ್ಣು ಮಣ್ಣು ತ್ರಿವಿಧವಾಗಿ ಎನ್ನನೆ ಕಾಡಿದವು. ಬಸವಣ್ಣಾ, ಆಶಾಪಾಶಂಗಳಾಗಿ ಎನ್ನನೆ ಕಾಡಿದವು. ಬಸವಣ್ಣಾ, ಗುರು ಬಸವಣ್ಣಾ, ಇವೆಲ್ಲಾ ನಿಮ್ಮಾಧೀನದವು: ನೀ ಮಾಡಿದಡಾದವು, ಬೇಡಾ ಎಂದಡೆ ಮಾದವು. ಅವಕ್ಕೆ ಎನ್ನನೊಪ್ಪಿಸದೆ, `ನಿನ್ನವ ನಿನ್ನವ' ಎನಿಸಾ, ಕಪಿಲಸಿದ್ಧಮಲ್ಲಿಕಾರ್ಜುನನ ತೋರಿದ ಗುರು ಬಸವಣ್ಣಾ.