Index   ವಚನ - 165    Search  
 
ಆಧಾರ ಸ್ವಾಧಿಷ್ಠಾನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೆ ಎಂದೆಂಬರು. ಈ ಆರ ಬಲ್ಲಡೆ ನೀವು ಹೇಳಿರೇ. ಆದಿಯನುಳ್ಳುದೆ ಆಧಾರ; ಆಧಾರವ ಕೂಡಿಪ್ಪುದೆ ಸ್ವಾಧಿಷ್ಠಾನ; ಮಣಿಯ ಬೆಳಗಿನಲ್ಲಿಪ್ಪುದೆ ಮಣಿಪೂರಕ; ಆಸೆಯಿಲ್ಲದುದೆ ಅನಾಹತ; ಅಲ್ಲ ಅಹುದೆಂಬುದನತಿಗಳೆಯದಿಹುದೆ ವಿಶುದ್ಧಿ; ಸರ್ವ ಜೀವಂಗಳಲ್ಲಿ ದಯವನುಳ್ಳದೆ ಆಜ್ಞೆ: ಇಂತಪ್ಪುದೀಗ ಶಿವಯೋಗ. ಉಳಿದ ಅಭ್ಯಾಸಯೋಗಿಗಳ ಕಂಡು ನಗುತಿರ್ದೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.