Index   ವಚನ - 190    Search  
 
ಆಯಿತ್ತಾಯಿತ್ತು ಫಲವಿಲ್ಲದ ವೃಕ್ಷ; ಆಯಿತ್ತಾಯಿತ್ತು ಪದವಿಲ್ಲದ ಫಲ; ಆಯಿತ್ತಾಯಿತ್ತು ಸೀಮೆಯ ಮೀರಿದ ಸಂಬಂಧ, ಆಯಿತ್ತಾಯಿತ್ತು ಅನ್ವಯದಲ್ಲಿ ಆಂದೋಳ, ಆಯಿತ್ತಾಯಿತ್ತು ನಿತ್ಯದಲ್ಲಿ ಭಕ್ತಿ , ಆಯಿತ್ತಾಯಿತ್ತು ಭಕ್ತಿಯಲ್ಲಿ ವೈರಾಗ್ಯ ಆಯಿತ್ತಾಯಿತ್ತು ವೈರಾಗ್ಯದಲ್ಲಿ ಅನುಗುಣ, ಆಯಿತ್ತಾಯಿತ್ತು ಅನುಗುಣದಲ್ಲಿ ಸ್ವಾನುಭಾವದ ಸಕಲಭಕ್ತಿ. ಸಕಲಭಕ್ತಿಯಿಂದ ಕಪಿಲಸಿದ್ಧ ಮಲ್ಲಿಕಾರ್ಜುನಯ್ಯನ ಸಂಯೋಗ ಬಸವಣ್ಣಂಗೆ.