ವಚನ - 242     
 
ಇದು ಪುಣ್ಯ, ಇದು ಪಾಪವೆನ್ನದೆ ಆಸೆ ಮಾಡುತಿಪ್ಪಳು. ಆ ಆಸೆಯೆಂಬವಳಿಂದವೆ ನಿಮ್ಮೆಡೆಗಾಣದಿಪ್ಪೆನು. ಈ ಆಸೆಯೆಂಬವಳನೆಂದಿಂಗೆ ನೀಗಿ, ಎಂದು ನಿಮ್ಮನೊಡಗೂಡಿ ಬೇರಾಗದೆಂದಿಪ್ಪೆನೊ ಕಪಿಲಸಿದ್ಧಮಲ್ಲಿಕಾರ್ಜುನಾ.