ವಚನ - 261     
 
ಈ ಆಸೆಯೆಂಬವಳು ನೋಡಾ ಜಲ ಸಮುದ್ರಂಗಳಂ ಕಟ್ಟಿಸುವಳು, ಕ್ಷಣ ಬೇಗದಿ ಮೂಷೆಗಳಂ ಮಾಡಿ ರಸಂಗಳಂ ಪಡೆವಳು. ಈ ಆಸೆಯೆಂಬವಳಿಂದವೆ ನಿಮ್ಮೆಡೆಗಾಣದಿಪ್ಪೆನು. ಈ ಆಸೆಯೆಂಬವಳನೆಂದಿಂಗೆ ನೀಗಿ ಎಂದು ನಿಮ್ಮನೊಡಗೂಡಿ ಬೇರಾಗದೆಂದಿಪ್ಪೆನು ಕಪಿಲಸಿದ್ಧಮಲ್ಲಿಕಾರ್ಜುನಾ.