ವಚನ - 343     
 
ಏನೆಂದೆನಿಸದ ವಸ್ತು, ಅಪ್ರಮಾಣಮೂರ್ತಿ ಬಸವ ಎಂಬ ಪದಕ್ಕೆ ನಿಂದಿತ್ತಯ್ಯಾ ನಿಮ್ಮ ಪ್ರಸಾದ, ಅರಿಯಬಾರದ ಬಸವನೆಂಬ ವಸ್ತುವನರುಹಿತ್ತಯ್ಯಾ ನಿಮ್ಮಪ್ರಸಾದ. ಬಸವನೆಂಬ ನಿಜವ ನಿಮ್ಮಲ್ಲಿ ನಿಲಿಸಿತ್ತಯ್ಯಾ ನಿಮ್ಮ ಪ್ರಸಾದ. ಕಪಿಲಸಿದ್ಧಮಲ್ಲಿನಾಥಯ್ಯಾ, ನಿಮ್ಮ ಅರ್ಪಿತ ಅನರ್ಪಿತವಾಯಿತ್ತಯ್ಯಾ, ನಿಮ್ಮ ಬಸವವಿಡಿದು.