ವಚನ - 472     
 
ಗಂಗೆಯೆ ಘನ ಮುಟ್ಟಿದ ಪ್ರಾಣಿಗಳೆಲ್ಲಾ ದೇವತೆಗಳೆಂದಡೆ, ಗಂಗೆಯ ಸಂಚಾರ ಸಾವಿರಾರು ಗಾವುದ. ಅದರಲ್ಲಿಯ ಪ್ರಾಣಿಗಳು ಅನಂತಾನಂತ. ಇಷ್ಟು ಜೀವಿಗಳೆಲ್ಲಾ ದೇವರಾದಡೆ, ಸ್ವರ್ಗದಲ್ಲಿ ನಿಯಮಿತ ದೇವತೆಗಳೆಂಬುದು ಅಪ್ರಸಿದ್ಧ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.