Index   ವಚನ - 485    Search  
 
ಗುರುಪಾದೋದಕದಿಂದ ಲಿಂಗಮಜ್ಜನ ಮಾಡಬಹುದಲ್ಲದೆ, ಬರಿಯುದಕದಿಂದೆರೆಯಬಹುದೆ ಕರಸ್ಥಲದ ತೇಜವ? ಮೀರಿದ ಮೀರಿದ ಮಾರ್ಗ ಹೇಳಿದರಯ್ಯಾ, ಎನ್ನ ಗುರುಗಳು. ಅನ್ಯಜಲವನೆರೆದೆನಾದಡೆ, ತಲೆ-ತಲೆದಂಡ ಕಪಿಲಸಿದ್ಧಮಲ್ಲಿಕಾರ್ಜುನಾ.