Index   ವಚನ - 501    Search  
 
ಗುರುವೆ ಎನ್ನ ತನುವಿಂಗೆ ಲಿಂಗದೀಕ್ಷೆಯ ಮಾಡಿ ಎನ್ನ ಜ್ಞಾನಕ್ಕೆ ಸ್ವಾನುಭಾವದೀಕ್ಷೆಯ ಮಾಡಿ ಎನ್ನ ತನು ಮನ ಧನದಲ್ಲಿ ವಂಚನೆಯಿಲ್ಲದೆ ಮಾಡಲೆಂದು ಜಂಗಮದೀಕ್ಷೆಯ ಮಾಡಿ ಎನ್ನ ಸರ್ವಾಂಗವು ನಿನ್ನ ವಿಶ್ರಾಮಸ್ಥಾನ ಶುದ್ಧಮಂಟಪವಾದ ಕಾರಣ, ಲೋಕವ್ಯಾಪ್ತಿಯನರಿಯದೆ ಲೋಕ ಎನ್ನೊಳಗಾಯಿತ್ತು, ಆ ಲೋಕಕ್ಕೆ ಹೊರಗಾದೆ. ಅದೇನು ಕಾರಣ? ಜನನ ಮರಣ ಪ್ರಳಯಕ್ಕೆ ಹೊರಗಾದೆನಾಗಿ. ಗುರುವೆ ಸದ್ಗುರುವೆ ಎನ್ನ ಭವದ ಬೇರ ಹರಿದೆ ಗುರುವೆ, ಭವಪಾಶವಿಮೋಚ[ನ]ನೆ, ಅನ್ವಯ ಮನದ ಸರ್ವಾಂಗಲೋಲುಪ್ತ, ಭುಕ್ತಿಮುಕ್ತಿ ಫಲಪ್ರದಾಯಕ ಗುರುವೆ ಬಸವಣ್ಣ, ಕಪಿಲಸಿದ್ಧಮಲ್ಲಿಕಾರ್ಜುನ ಚೆನ್ನಬಸವಣ್ಣನಾಗಿ ಪ್ರಭು ಮೊದಲಾಗಿ ಅಸಂಖ್ಯಾತರನೆಲ್ಲರನು ತೋರಿದ ಗುರುವೆ.