Index   ವಚನ - 607    Search  
 
ತಾ ಮಾಡಿದ ಹೆಣ್ಣು ತನ್ನ ತಲೆಯನೇರಿತ್ತು ತಾ ಮಾಡಿದ ಹೆಣ್ಣು ತನ್ನ ತೊಡೆಯನೇರಿತ್ತು ತಾ ಮಾಡಿದ ಹೆಣ್ಣು ಬ್ರಹ್ಮನ ನಾಲಗೆಯನೇರಿತ್ತು ತಾ ಮಾಡಿದ ಹೆಣ್ಣು ನಾರಾಯಣನ ಎದೆಯನೇರಿತ್ತು ಅದು ಕಾರಣ, ಹೆಣ್ಣು ಹೆಣ್ಣಲ್ಲ ಹೆಣ್ಣು ರಾಕ್ಷಸಿಯಲ್ಲ ; ಹೆಣ್ಣು ಪ್ರತ್ಯಕ್ಷ ಕಪಿಲಸಿದ್ಧಮಲ್ಲಿಕಾರ್ಜುನ ನೋಡಾ!