Index   ವಚನ - 756    Search  
 
ಪಾದೋದಕವು ಲಿಂಗದ ಮೇಲೆ ಎರೆದಲ್ಲಿ ಜಂಗಮ ಘನವಾಯಿತ್ತು. ಆ ಲಿಂಗೋದಕ ಸ್ವೀಕರಿಸಿದಲ್ಲಿ ಜಂಗಮಕ್ಕೆ ಘನವಾಯಿತ್ತು. ಲಿಂಗದ ಕಳೆಯೆ ಜಂಗಮ, ಜಂಗಮದ ಕಳೆಯೇ ಲಿಂಗ; ಆವುದ ಘನವೆಂಬೆ; ಆವುದ ಕಿರಿದೆಂಬೆ? ಲಿಂಗ-ಜಂಗಮ ನೇತ್ರದಲ್ಲಿಯ ಪ್ರಕಾಶದಂತೆ ತಿಳಿದೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.