Index   ವಚನ - 836    Search  
 
ಭಕ್ತಿಸ್ಥಲದ ಮರ್ಮವನು ಲೋಕಕ್ಕೆ ನಿಶ್ಚಿಂತವ ಮಾಡಿ ತೋರಿದ ಬಸವಣ್ಣ. ತನ್ನ ಪದದುನ್ನತವ ಏಕೈಕಸದ್ಭಾವರಿಗಿತ್ತ ಎನ್ನ ಗುರು ಚೆನ್ನಬಸವಣ್ಣನು. ಬಸವ, ಚೆನ್ನಬಸವನೆಂಬ ಮಹಾಸಮುದ್ರದೊಳಗೆ ಹರುಷಿತನಾದೆನೈ ಕಪಿಲಸಿದ್ಧಮಲ್ಲಿಕಾರ್ಜುನಾ.