Index   ವಚನ - 868    Search  
 
ಮನವೆಂಬ ಮಂಟಪದ ನೆಳಲಲ್ಲಿ ನೆನೆಹೆಂಬ ಜ್ಞಾನಜ್ಯೋತಿಯ ಬೆಳಗನಿಟ್ಟು ಘನಪುರುಷ ಪವಡಿಸೈದಾನೆ, ಎಲೆ ಅವ್ವಾ. ಅದನೊಂದೆರಡೆನ್ನದೆ ಮೂರು ಬಾಗಿಲ ಮುಚ್ಚಿ ನಾಲ್ಕ ಮುಟ್ಟದೆ ಐದ ತಟ್ಟದೆ ಇರು ಕಂಡಾ, ಎಲೆ ಅವ್ವಾ. ಆರೇಳೆಂಟೆಂಬ ವಿಹಂಗಸಂಕುಳದ ಉಲುಹು ಪ್ರಬಲವಾದಡೆ, ಕಪಿಲಸಿದ್ಧಮಲ್ಲಿಕಾರ್ಜುನನು ನಿದ್ರೆಗೆಟ್ಟಲ್ಲಿರನು.