Index   ವಚನ - 1048    Search  
 
ಸಕ್ಕರೆಯು ಆಕಾರ, ರುಚಿಯು ನಿರಾಕಾರ; ಲಿಂಗವಾಕಾರ, ಜಂಗಮ ನಿರಾಕಾರ; ಬೆಣ್ಣೆ ಆಕಾರ, ಘೃತ ನಿರಾಕಾರ. ಆಕಾರ ಬಿಟ್ಟು ನಿರಾಕಾರವಿಲ್ಲ, ನಿರಾಕಾರ ಬಿಟ್ಟು ಆಕಾರವಿಲ್ಲ. ಲಿಂಗ ಜಂಗಮವೆಂಬುಭಯ ಶಬ್ದ ಒಂದೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.