ವಚನ - 1225     
 
ಭಕ್ತನಾದಡೆ ಬಸವಣ್ಣನಂತಾಗಬೇಕು. ಜಂಗಮವಾದಡೆ ಪ್ರಭುವಿನಂತಾಗಬೇಕು. ಭೋಗಿಯಾದಡೆ ನಮ್ಮ ಗುರು ಚೆನ್ನಬಸವಣ್ಣನಂತಾಗಬೇಕು. ಯೋಗಿಯಾದಡೆ ನನ್ನಂತಾಗಬೇಕು ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.