Index   ವಚನ - 1248    Search  
 
ತನು ಉಂಟೆಂಬ ಭಾವ ಮನದಲ್ಲಿಲ್ಲವಯ್ಯಾ; ಮನ ಉಂಟೆಂಬ ಭಾವ ಅರುಹಿನಲಿಲ್ಲವಯ್ಯಾ; ಅರುಹು ಉಂಟೆಂಬ ಭಾವ ನುಡಿಯೊಳಗಿಲ್ಲವಯ್ಯಾ; ಇಂತೀ ತನು ಮನ ಜ್ಞಾನವೆಂಬ ತ್ರಿವಿಧವು ಏಕಾರ್ಥವಾದ ಬಳಿಕ, ಆವ ತನುವಿನ ಮೇಲೆ ಸ್ವಾಯತವ ಮಾಡುವೆ? ಎನ್ನ ಕಾಯವೆ ಬಸವಣ್ಣನು, ಎನ್ನ ಪ್ರಾಣಲಿಂಗವೆ ಪ್ರಭುದೇವರು, ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಒಳಗು ಹೊರಗೆಂಬುದಿಲ್ಲ ಕಾಣಾ, ಚೆನ್ನಬಸವಣ್ಣಾ.