Index   ವಚನ - 1345    Search  
 
ಅಣುವಿನೊಳಗೆ ಅಣುವಾಗಿಪ್ಪಿರಿ, ಎಲೆ ದೇವಾ, ನೀವು; ಮನದೊಳಗೆ ಘನವಾಗಿಪ್ಪಿರಿ ಎಲೆ ದೇವಾ. ಜಗದೊಳಗೆಲ್ಲಿಯೂ ನೀವಿಲ್ಲದೆಡೆಯುಂಟೆ? ಎಂಬತ್ತುನಾಲ್ಕುಲಕ್ಷ ಶಿವಾಲಯಂಗಳ ಮಾಡಿ ನೀವು ಒಮ್ಮನದೊಳಗಿಪ್ಪುದ ಕಂಡು ನಾನು ಮಾಡಿದೆನಲ್ಲದೆ, ಕಪಿಲಸಿದ್ಧಮಲ್ಲಯ್ಯಾ, ಎನಗೆ ಬೇರೆ ಸ್ವತಂತ್ರವಿಲ್ಲವೆಂದರಿವೆನು.