ನೀರ ಕ್ಷೀರದ ಸಂದುಗಳ ಹಂಸೆ ಬಿಚ್ಚಬಲ್ಲುದು, ನೋಡಯ್ಯಾ.
ದೇಹದ ಜೀವದ ಸಂದ ನೀವು ಬಿಚ್ಚಬಲ್ಲಿರಲ್ಲದೆ
ನಾನೆತ್ತ ಬಲ್ಲೆನಯ್ಯಾ?
ನೀವಿಕ್ಕಿದ ತೊಡಕ ಬಿಡಿಸಬಾರದು;
ನೀವು ಬಿಡಿಸಿದ ತೊಡಕನಿಕ್ಕಬಾರದು.
ಕಪಿಲಸಿದ್ಧಮಲ್ಲಿನಾಥಯ್ಯಾ,
ಎನ್ನ ಕಾಯದ ಜೀವದ ಹೊಲಿಗೆಯ ಬಿಡಿಸಾ,
ನಿಮ್ಮ ಧರ್ಮ.
Art
Manuscript
Music
Courtesy:
Transliteration
Nīra kṣīrada sandugaḷa hanse biccaballudu, nōḍayya.
Dēhada jīvada sanda nīvu biccaballirallade
nānetta ballenayyā?
Nīvikkida toḍaka biḍisabāradu;
nīvu biḍisida toḍakanikkabāradu.
Kapilasid'dhamallināthayya,
enna kāyada jīvada holigeya biḍisā,
nim'ma dharma.