Index   ವಚನ - 1356    Search  
 
ಅಯ್ಯಾ, ಮನದ ರಜದ ಮಣ್ಣ ಕಳೆದು ದಯಾ ಶಾಂತಿಯುದಕವ ತೆಗೆವೆನಯ್ಯಾ, ಜಳಕವ ಮಾಡಿ ಯೋಗಕಂಪನಿಕ್ಕಿ ಹೊದೆವೆನಯ್ಯಾ, ಅದನೊಂದೆಡೆಗೆ ತಂದು ಬಟ್ಟಗಾಣದಲ್ಲಿಕ್ಕಿ ಹಿಳಿವೆನಯ್ಯಾ. ಹಿಳಿದ ರಸದ ಕಂಪ ಕೊಡುವ ಒಡೆಯ ನೀನೆ, ಕಪಿಲಸಿದ್ಧಮಲ್ಲಿನಾಥಯ್ಯಾ.