Index   ವಚನ - 1373    Search  
 
ಜಲದಲ್ಲಿ ಉದಯಿಸಿ ಮತ್ತೆ ಜಲವು ತಾನಲ್ಲ; ಜಲವೆಂದಿಪ್ಪುದೀ ಲೋಕವೆಲ್ಲಾ. ಪರಮಗುರು ಬಸವಣ್ಣ ಜಗವ ಪಾಲಿಸ ಬರಲು ಎನ್ನ ಪರಿಭವದ ದಂದುಗ ಹರಿಯಿತ್ತಯ್ಯಾ. ಆ ಸುದ್ದಿಯನರಿಯದೆ ಅನೇಕ ಜಡರುಗಳೆಲ್ಲ ಬೇಕಾದ ಪರಿಯಲ್ಲಿ ನುಡಿವುತ್ತಿಹರು. ಸತ್ತಪ್ರಾಣಿಯನೆತ್ತಿ ಒಪ್ಪಿಪ್ಪ ನಿಶ್ಚಯವು ಮರ್ತ್ಯದವರಿಗುಂಟೆ ಶಿವಗಲ್ಲದೆ? ಶಿವಗುರು ಬಸವಣ್ಣ, ಬಸವಗುರು ಶಿವನಾಗಿ, ದೆಸೆಗೆಟ್ಟ ದೇವತಾಪಶುಗಳಿಗೆ ಪಶುಪತಿಯಾದನು. ಬಸವಣ್ಣನ ನೆನಹು ಸುಖಸಮುದ್ರವಯ್ಯಾ! ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ಬಸವಣ್ಣನ ತೋರಿದಿರಾಗಿ ಬದುಕಿದೆನಯ್ಯಾ ಪ್ರಭುವೆ.