Index   ವಚನ - 1381    Search  
 
ಆದಿಯ ಮೂರ್ತಿಯಲ್ಲ, ಅನಾದಿಯ ಬಚ್ಚಬರಿಯ ಶೂನ್ಯವಲ್ಲ, ಅಂಗವಿದ್ದು ಅಂಗವಿಲ್ಲದ ಸಂಗ ಘನಪದದಲ್ಲಿ ವೇದ್ಯವಾದ ಮರುಳಶಂಕರದೇವರ ನಿಲವ ಪ್ರಭು ಬಸವಣ್ಣನಿಂದ ಕಂಡು ಬದುಕಿದೆನು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.