Index   ವಚನ - 1406    Search  
 
ಇನ್ನು ಹೊಗಳುವೆನಯ್ಯಾ, ಲಿಂಗದ ಕುಲಾವಳಿಯನ್ನೆತ್ತಿ; ಇನ್ನು ಹೊಗಳುವೆನಯ್ಯಾ, ಜಂಗಮದ ಜ್ಞಾನವ ಕಂಡು; ಇನ್ನು ಹೊಗಳುವೆನಯ್ಯಾ, ಚೆನ್ನಬಸವಣ್ಣನೆಂಬ ಪರಾತ್ಪರ ಗುರುಮೂರ್ತಿಯ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.