ವಚನ - 1501     
 
ಕುಲವೆಂದು ಹೋರಾಡುವ ಅಣ್ಣಗಳಿರಾ, ಕೇಳಿರೊ: ಕುಲವೇ ಡೋಹರನ? ಕುಲವೇ ಮಾದಾರನ? ಕುಲವೇ ದೂರ್ವಾಸನ? ಕುಲವೇ ವ್ಯಾಸನ? ಕುಲವೇ ವಾಲ್ಮೀಕನ? ಕುಲವೇ ಕೌಂಡಿಲ್ಯನ? ಕುಲವ ನೋಳ್ಪಡೆ ಹುರುಳಿಲ್ಲ ; ಅವರ ನಡೆಯ ನೋಳ್ಪಡೆ ನಡೆಯುವರು ತ್ರಿಲೋಕದಲ್ಲಿಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.