Index   ವಚನ - 1513    Search  
 
ಶುಭಕ್ಕೆ ವಿಘ್ನವಲ್ಲದೆ ಅಶುಭಕ್ಕೆ ವಿಘ್ನವೆ ಅಯ್ಯಾ? ಅಭಿಮಾನಿಗೆ ಅಂಜಿಕೆಯಲ್ಲದೆ ಅಪಮಾನಿಗೆ ಅಂಜಿಕೆಯೆ ಅಯ್ಯಾ? ಶುಭಾಶುಭ ಶಿವಾರ್ಪಣವೆಂದು ನಂಬು ಮನವೆ, ಕಪಿಲಸಿದ್ಧಮಲ್ಲೇಂದ್ರನಾಲಯದಲ್ಲಿ.