Index   ವಚನ - 1517    Search  
 
ಶಾಸ್ತ್ರವೆಂಬುದು ಮನ್ಮಥಶಸ್ತ್ರವಯ್ಯಾ. ವೇದಾಂತವೆಂಬುದು ಮೂಲ ಮನೋವ್ಯಾಧಿಯಯ್ಯಾ. ಪುರಾಣವೆಂಬುದು ಮೃತವಾದವರ ಗಿರಾಣವಯ್ಯಾ. ತರ್ಕವೆಂಬುದು ಮರ್ಕಟಾಟವಯ್ಯಾ. ಆಗಮವೆಂಬುದು ಯೋಗದ ಘೋರವಯ್ಯಾ. ಇತಿಹಾಸವೆಂಬುದು ರಾಜರ ಕಥಾಭಾಗವಯ್ಯಾ. ಸ್ಮೃತಿಯೆಂಬುದು ಪಾಪಪುಣ್ಯವಿಚಾರವಯ್ಯಾ. ಆದ್ಯರ ವಚನವೆಂಬುದು ಬಹುವೇದ್ಯವಯ್ಯಾ, ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ತಿಳಿಯಲಿಕ್ಕೆ.