Index   ವಚನ - 1529    Search  
 
ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.