Index   ವಚನ - 1539    Search  
 
ಊರಲ್ಲಿರುವ ವಸ್ತು ಅದೆ ನೋಡಯ್ಯಾ. ವನದಲ್ಲಿರುವ ವಸ್ತು ಅದೆ ನೋಡಯ್ಯಾ. ಚರಿಸಿ ಚರಿಸಿ ಜಗವನುದ್ಧರಿಸುವ ವಸ್ತು ಅದೆ ನೋಡಯ್ಯಾ. ಮೂಲೋಕದೆರೆಯ ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಪರವಸ್ತು ಅದೆ ನೋಡಯ್ಯಾ.