ವಚನ - 1568     
 
ನಿತ್ಯ ನಿತ್ಯ ಕೋಣವ ತಿನ್ನಬಲ್ಲಡೆ, ಸದಾಚಾರಿ ಜಂಗಮವೆಂಬೆ. ನಿತ್ಯ ನಿತ್ಯ ಕೋಡಗನ ಹಿಡಿದು ಆಡುಗಳ ತಿನಬಲ್ಲಡೆ ಪ್ರಾಣಲಿಂಗಿ ಎಂಬೆ ಕಪಿಲಸಿದ್ಧಮಲ್ಲಿಕಾರ್ಜುನಾ.