Index   ವಚನ - 1587    Search  
 
ಎಮ್ಮ ವಚನದೊಂದು ಪಾರಾಯಣಕ್ಕೆ ವ್ಯಾಸನದೊಂದು ಪುರಾಣ ಸಮ ಬಾರದಯ್ಯಾ. ಎಮ್ಮ ವಚನದ ನೂರೆಂಟರಧ್ಯಯನಕ್ಕೆ ಶತರುದ್ರೀ[ಯಯಾಗ] ಸಮ ಬಾರದಯ್ಯ. ಎಮ್ಮ ವಚನದ ಸಾಸಿರ ಪಾರಾಯಣಕ್ಕೆ ಗಾಯತ್ರೀ ಲಕ್ಷ ಜಪ ಸಮ ಬಾರದಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.