Index   ವಚನ - 1592    Search  
 
ಓದುವುದು ಸದ್ಗುಣಕ್ಕಲ್ಲದೆ ಕಿವಿಯನೂದುವುದಕ್ಕೇನೋ, ಅಯ್ಯಾ? ಮಾಡುವ ಭಕ್ತಿ ಮೋಕ್ಷಕ್ಕಲ್ಲದೆ ಡಂಬಾಚಾರಕ್ಕೇನೋ, ಅಯ್ಯಾ? ಆಡುವ ವೇಷ ದ್ರವ್ಯಕ್ಕಲ್ಲದೆ ಜನರಾಡಂಬರಕ್ಕೇನೋ, ಅಯ್ಯಾ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.