ವಚನ - 1597     
 
ನೀರಿಲ್ಲದ ಭೂಮಿಯಲ್ಲಿ ಮೂರು ಹೇರು ನವಣೆಯ ಬೆಳೆದುದು ಕಂಡೆ. ಆ ನವಣೆ ಅಳೆದುಕೊಡುವಡೆ ಇಮ್ಮಡಿ ಮುಮ್ಮಡಿಯಾದುದು ಕಂಡೆ. ಕೊಂಡವಂಗೆ ಜನ್ಮಜನ್ಮದಲ್ಲಿ ಭೋಗಿಸುವುದಕ್ಕೆ ಕಣಜಗಳಾದುದು ಕಂಡೆ. ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.