ವಚನ - 1731     
 
ಮಾಡಬಾರದ ನೇಮವ ಮಾಡಿ ಕೆಡದಿರಾ, ಮನವೆ. ಮಾಡುವ ನೇಮ, ಮಾಡಬಾರದ ನೇಮಂಗಳವು, ಭೂತ ಭವಿಷ್ಯ ವರ್ತಮಾನಂಗಳವು. ಮಾಡುವ ನೇಮಂಗಳು: ನಿತ್ಯ ಲಿಂಗಾರ್ಚನೆ ಜಂಗಮದಾಸೋಹವೆಂದು[ದು] ಕಪಿಲಸಿದ್ಧಮಲ್ಲಿಕಾರ್ಜುನನ ವಚನ, ಮನವೆ.