ವಚನ - 1755     
 
ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗದಿರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗದಿರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ.