ವಚನ - 1817     
 
ಎನ್ನ ಘ್ರಾಣದಲ್ಲಿ ಆಚಾರಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಜಿಹ್ವೆಯಲ್ಲಿ ಗುರುಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ನೇತ್ರದಲ್ಲಿ ಶಿವಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ತ್ವಕ್ಕಿನಲ್ಲಿ ಜಂಗಮಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಶ್ರೋತ್ರದಲ್ಲಿ ಪ್ರಸಾದಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಹೃದಯದಲ್ಲಿ ಮಹಾಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಸ್ಥೂಲದೇಹದಲ್ಲಿ ಇಷ್ಟಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಸೂಕ್ಷ್ಮದೇಹದಲ್ಲಿ ಪ್ರಾಣಲಿಂಗವಾಗಿ ಬಂದ ಗುರು ಚೆನ್ನಬಸವಣ್ಣ. ಎನ್ನ ಕಾರಣದೇಹದಲ್ಲಿ ಭಾವಲಿಂಗವಾಗಿ ಬಂದ ಗುರು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಚೆನ್ನಬಸವಣ್ಣ.