Index   ವಚನ - 1871    Search  
 
ವೇದ ವೇದಂಗಳೆಲ್ಲ ಶಿವನ ಹೊಗಳಿ ನಿರ್ಮಲವಾದವು ನೋಡಾ. `ಓಂ ನಮಃ ಸೋಮಾಯ ಚ ರುದ್ರಾಯ ಚ' ಎಂದು ವೇದವಾಕ್ಯ ನೋಡಾ. `ನಮಸ್ತಾಮ್ರಾಯ ಚಾರುಣಾಯ ಚ' ಎಂದು ಪಂಡಿತಮುಖಪ್ರಸಿದ್ಧ ನೋಡಾ. `ನಮಃ ಶೃಂಗಾಯ ಚ ಪಶುಪತಯೇ ಚ' ಎಂದು ವೇದಾಧ್ಯಾಯಿಗಳರಿಕೆ ನೋಡಾ. `ನಮಃ ಶಿವಾಯ ಚ ಶಿವತರಾಯ ಚ' ಎಂದು ಕಪಿಲಸಿದ್ಧಮಲ್ಲಿಕಾರ್ಜುನನ ಪಂಚಮುಖದಲ್ಲಿ ನಿತ್ಯ ನಿತ್ಯ ಘೋಷ ನೋಡಾ, ಕೇದಾರಯ್ಯಾ.