ವಚನ - 1905     
 
ಗುಣದಿಂದ ಹಾರುವನಲ್ಲದೆ, ಅಗಣಿತ ವಿದ್ಯಾಭ್ಯಾಸದಿಂದ ಹಾರುವನಲ್ಲ. ಹಾರಬೇಕು ಮಲತ್ರಯಂಗಳ; ಹಾರಬೇಕು ಸೃಷ್ಟಿ-ಸ್ಥಿತಿ ಲಯವ; ಹಾರಬೇಕು, ಸರ್ಪಹಾರ ಕಪಿಲಸಿದ್ಧಮಲ್ಲಿಕಾರ್ಜುನನ ಆಹಾರದಲ್ಲಿ.