Index   ವಚನ - 1907    Search  
 
ಕುಲದಿಂದಧಿಕವೆಂದು ಹೋರಾಡುವ ಅಣ್ಣಗಳಿರಾ, ಕೇಳಿರಯ್ಯಾ. ಬ್ರಾಹ್ಮಣನವ ಮಧುವಯ್ಯ, ಚಂಡಾಲನವ ಹರಳಯ್ಯ, ದೂರ್ವಾಸನವ ಮಚ್ಚಿಗ, ಊರ್ವಶಿಯಾಕೆ ದೇವಾಂಗನೆ, ಚಂಡಾಲನವ ಪರಾಶರ, ಕುಸುಮಗಂಧಿಯಾಕೆ ಕಬ್ಬಿಲಗಿತ್ತಿ. `ಜಪತಸ್ತಪತೋ ಗುಣತಃ' ಕಪಿಲಸಿದ್ಧಮಲ್ಲಿಕಾರ್ಜುನಾ ಕೇಳಾ, ಕೇದಾರಯ್ಯ.