Index   ವಚನ - 2    Search  
 
ಅಮೃತದ ಸವಿ ಸ್ವಾದಿಸುವರಿಗಲ್ಲದೆ ಅಮೃತ ತನ್ನ ತಾ ಸ್ವಾದಿಸದ ಪರಿಯಂತೆ ನಿತ್ಯತೃಪ್ತಂಗೆ ಅಪ್ಯಾಯನ ಉಂಟೇ ಬಸವಣ್ಣಾ? ಏಳ್ನೂರೆಪ್ಪತ್ತಮರಗಣಂಗಳ ಕಟ್ಟಳೆಯ ನೇಮದ ಕಟ್ಟು ನಿನ್ನದು ಬಸವಣ್ಣಾ. ನಿನಗೆ ಭಾವ ನಿರ್ಭಾವವೆಂಬುದುಂಟೇ ಬಸವಣ್ಣಾ? ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ, ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.