Index   ವಚನ - 56    Search  
 
ಪಂಕವ ಮೆಟ್ಟಿದ ಅಡಿ, ಉಭಯಕ್ಕೆ ಶಂಕೆದೋರದಿಹುದೆ? ತ್ರಿವಿಧವ ಕೂಡಿ ಆಡುವ ಮನ, ಅವರೊಳು ಒಡಗೂಡದಿಹುದೆ? ಅದರ ತೊಡಿಗೆಯನರಿತಡೆ ಗಡಿಗೆಯನೊಡಗೂಡಿದ ಜಲದಂತಿರಬೇಕು. ಕಾರ್ಯ ಕೂಡಿದಲ್ಲಿ ಗಡಿಗೆಯಾಗಿ, ಮತ್ತೆ ವಾರಿಯ ಬೆರಸದಂತಿರಬೇಕು. ಇದು ಕರತಳಾಮಳಕ, ಬಂಕೇಶ್ವರಲಿಂಗವನರಿವುದಕ್ಕೆ.