Index   ವಚನ - 1    Search  
 
ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆ. ಹಿಡಿದಡೆ ಬತ್ತಲೆ ನಿಲಿಸಿ ಕೊಲುವರಯ್ಯಾ. ವ್ರತಹೀನನನರಿದು ಬೆರೆದಡೆ ಕಾದ ಕತ್ತಿಯಲ್ಲಿ ಕೈ ಕಿವಿ ಮೂಗ ಕೊಯ್ವರಯ್ಯಾ. ಒಲ್ಲೆನೊಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ.