Index   ವಚನ - 34    Search  
 
ಗಂಗಾನದಿಯಲ್ಲಿ ಮಿಂದು ಗಂಜಳದಲ್ಲಿ ಹೊರಳುವರೆ ? ಚಂದನವಿದ್ದಂತೆ ದುರ್ಗಂಧವ ಮೈಯಲ್ಲಿ ಪೂಸುವರೆ ? ಸುರಭಿ ಮನೆಯಲ್ಲಿ ಕರೆವುತ್ತಿರೆ, ಹರಿವರೆ ಸೊಣಗನ ಹಾಲಿಂಗೆ ? ಬಯಸಿದಮೃತವಿದ್ದಂತೆ, ಅಂಬಿಲವ ನೆರೆದುಂಬ ಭ್ರಮಿತಮಾನವಾ, ನೀನು ಕೇಳಾ. ಪರಮಪದವಿಯನೀವ ಚೆನ್ನಸೊಡ್ಡಳನಿದ್ದಂತೆ, ಸಾವದೇವರ ನೋಂತರೆ, ಕಾವುದೆ ನಿನ್ನ ?