Index   ವಚನ - 60    Search  
 
ಬನ್ನಿ ಕರಣಿಕರು, ನೀವು ಲೆಕ್ಕವ ಹೇಳಿ, ಧಾನ್ಯ ಧಾನ್ಯಂಗಳ ಸಂಚವನು. ಹೊಸಜೋಳ ಅರುವತ್ತು ಲಕ್ಷ ಖಂಡುಗ, ಶಾಲಿಧಾನ್ಯ ಮೂವತ್ತು ಲಕ್ಷ ಖಂಡುಗ, ಗೋಧಿ ಹನ್ನೆರಡು ಲಕ್ಷ ಖಂಡುಗ, ಕಡಲೆ ಬತ್ತೀಸ ಖಂಡುಗ, ಹೆಸರು ಮೂವತ್ತಾರು ಲಕ್ಷ ಖಂಡುಗ, ನವಣೆ ಹಾರಕ ಬರಗು ಸಾವೆ ದೂಸಿಗಳೆಂಬ ಧಾನ್ಯ ಐವತ್ತು ಲಕ್ಷ ಖಂಡುಗ. ಹೊಸಸುಗ್ಗಿಯ ವೇಳೆಗೆ ಬಹ ಭತ್ತ ಅಗಣಿತ. ಮಹಾದಾನಿ ಸೊಡ್ಡಳನ ಆರೋಗಣೆಯ ಅವಸರಕ್ಕೆ ಅಳವಟ್ಟ ಸಯದಾನ ಇನಿತನವಧರಿಸಯ್ಯಾ, ಸಂಗನಬಸವಣ್ಣಾ.