Index   ವಚನ - 93    Search  
 
ಸಂಸಾರ ಸಂಸಾರ, ಕಾಳಗತ್ತಲೆ ಕಾಳಗತ್ತಲೆ. ಕರ ಹಿರಿದು ಕರ ಹಿರಿದು, ಎಚ್ಚತ್ತಿರು ಎಚ್ಚತ್ತಿರು ಜ್ಞಾನಧನಕ್ಕೆ. ಎಚ್ಚತ್ತಿರು ಎಚ್ಚತ್ತಿರು ಇಂದ್ರಿಯಗಳ್ಳರಿಗೆ. ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ. ಜನ್ಮ ದುಃಖಂ ಜರಾ ದುಃಖಂ ನಿತ್ಯಂ ದುಃಖಂ ಪುನಃ ಪುನಃ | ಸಂಸಾರಸಾಗರೋ ದುಃಖಂ ತಸ್ಮಾತ್ ಜಾಗ್ರತ ಜಾಗ್ರತ ||ಎಂದುದಾಗಿ, ಸಲೆ ಜೀವಿತಗೊಂಡ ಸೊಡ್ಡಳ ಆಳು ಭಲಾ ಭಲಾ ಎನ್ನುತ್ತಿರಾ.