Index   ವಚನ - 4    Search  
 
ಹುಟ್ಟು ಹೊಂದೆಂಬುದಿಲ್ಲದ ದೇವಾ, ನಿಮ್ಮಿಂದ ನೀವೆ ಶೂನ್ಯದಲ್ಲಿ ನಿಂದು ಸ್ವಯಂಭುವಾದಿರಲ್ಲ. ಬೀಜ ವೃಕ್ಷದಂತೆ ಸಾಕಾರ ನಿರಾಕಾರವು ನೀವೆಯಾದಿರಲ್ಲ. ಸಕಲವೆಲ್ಲಕ್ಕೆ ಮೂಲಿಗರಾದಿರೆಲ್ಲ. ನಿಮ್ಮ ನಿಜವ ನೀವೇ ಅರಿವುತ್ತಿರ್ದಿರಲ್ಲ. ನಿಮ್ಮ ಮಹಿಮೆಯ ನೀವೇ ಬಲ್ಲಿರಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.