Index   ವಚನ - 57    Search  
 
ಎರವಿನ ಬದುಕು ಸ್ಥಿರವಲ್ಲ. ಅಭ್ರಛಾಯದಂತೆ ನಿಮಿಷದಲ್ಲಿ ತೋರಿಯಡಗಲು, ಈ ಸಂಸಾರದಲ್ಲೇನು ಲೇಸು ಕಂಡು ನಚ್ಚುವೆ? ನಚ್ಚದಿರು. ನಚ್ಚಿದವರ ಕೆಟ್ಟ ಕೇಡಿಂಗೆ ಕಡೆಯಿಲ್ಲ. ಬರಿಯ ಬಯಲ ಭ್ರಮೆ ಸಟೆಯ ಸಂಸಾರ. ಇದರಲ್ಲೇನೂ ಲೇಸಿಲ್ಲವೆಂದರಿದು ದೃಢವಿಡಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶ್ರೀಚರಣವನು.