Index   ವಚನ - 74    Search  
 
ಶ್ರೀಗುರು ಕರುಣಿಸಿ, ಅಂಗದ ಮೇಲೆ ಲಿಂಗವ ಧರಿಸಿದ ಕಾರಣ, ಸರ್ವಾಂಗವು ಲಿಂಗವಾಯಿತ್ತು. ಅದೆಂತೆಂದಡೆ: ಅಗ್ನಿಯಿಂದ ತಪ್ತವಾದ ಲೋಹದ ಪುತ್ಥಳಿಯಂತೆ, ಒಳಗೂ ಹೊರಗೂ ಏಕವಾಗಿ ಲಿಂಗವೆ ಬೆಳಗುತಿರ್ದ ಕಾರಣ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ, ನಿಮ್ಮಶರಣ ಸರ್ವಾಂಗಲಿಂಗಿಯಾದನು.