Index   ವಚನ - 93    Search  
 
ಆಚಾರವಿಲ್ಲದವರಿಗೆ ಜ್ಞಾನವಿಲ್ಲ. ಜ್ಞಾನವಿಲ್ಲದವರಿಗೆ ಭಾವಶುದ್ಧವಿಲ್ಲ. ಭಾವಶುದ್ಧವಿಲ್ಲದವರಿಗೆ ಧ್ಯಾನವಿಲ್ಲ. ದ್ಯಾನಶುದ್ಧವಿಲ್ಲದವರಿಗೆ ಪ್ರಸಾದವಿಲ್ಲ. ಪ್ರಸಾದವಿಲ್ಲದವರಿಗೆ ಮುಕ್ತಿಯಿಲ್ಲ. ಇದು ಕಾರಣ, ಆಚಾರ ಜ್ಞಾನ ಭಾವ ಧ್ಯಾನ ಉಳ್ಳವರಿಗೆ ಪ್ರಸಾದವುಂಟು. ಪ್ರಸಾದ ಉಳ್ಳವರಿಗೆ ಮುಕ್ತಿಯುಂಟು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.