ಹಾವಾಡಿಗ ಹಾವನಾಡಿಸುವಲ್ಲಿ,
ತನ್ನ ಕಾಯ್ದುಕೊಂಡು, ಹಾವನಾಡಿಸುವಂತೆ,
ಆವ ಮಾತನಾಡಿದಡೂ, ತನ್ನ ಕಾಯ್ದು ಆಡಬೇಕು.
ಅದೆಂತೆಂದಡೆ,
ತನ್ನ ವಚನವೆ ತನಗೆ ಹಗೆಯಹುದಾಗಿ.
ಅನ್ನಿಗರಿಂದ ಬಂದಿತ್ತೆನ್ನಬೇಡ.
ಅಳಿವುದು ಉಳಿವುದು ತನ್ನ ವಚನದಲ್ಲಿಯೆ ಅದೆ.
ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ,
ಹಗೆಯು ಕೆಳೆಯು ತನ್ನ ವಚನವೇ, ಬೇರಿಲ್ಲ.