ಪ್ರಸಾದವ ಬಯಸಿ ಪರವನರಿದೆನೆಂಬವಂಗೆ,
ಬೇರೆ ಮತ್ತೆ ಸಾಧಿಸಿ ಅರಿದೆನೆಂಬ ಬಳಲಿಕೆಯದೇಕೇ?
ಜಂಗಮವೆ ಲಿಂಗವೆಂದು ನಂಬಿ ಪೂಜೆಯ ಮಾಡಲು,
ಅದು ತಾನೆ, ಲಿಂಗಪೂಜೆ ನೋಡಾ.
ಆ ಜಂಗಮ ಭಕ್ತಿಯಿಂದ
ಪ್ರಸಾದ ಸಾಧ್ಯವಹುದು. ಮುಂದೆ ಪರವನರಿವ.
ಇದು ಕಾರಣ,
ಜಂಗಮಭಕ್ತಿಯೇ ವಿಶೇಷ, ಇದು ತಪ್ಪದು,
ನಿಜಗುರು ಸ್ವತಂತ್ರಲಿಂಗೇಶ್ವರನ
ನಂಬಿ ನಿಜವನೈದುವಂಗೆ.